ತೊಡಿಕಾನ : ನೇಣು ಬಿಗಿದು ಆತ್ಮಹತ್ಯೆ

0

ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಇಂದು ಮುಂಜಾನೆ(ಆ.೨೭ರಂದು) ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ ಎಂದು ತಿಳಿದು ಬಂದಿದೆ. ಅವರಿಗೆ ೪೫ ವರ್ಷ ವಯಸ್ಸಾಗಿತ್ತು.
ಮೃತರು ತಂದೆ, ತಾಯಿ, ಹಾಗೂ ಪತ್ನಿ ರಮ್ಯ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.