ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಗೀತಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಕಬ್ ವಿಭಾಗದ ವಿದ್ಯಾರ್ಥಿಗಳು ಗೀತ ಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ , ಸುಳ್ಯ ರೋಟರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಕಬ್ ವಿಭಾಗವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ವಿದ್ಯಾಸಂಸ್ಥೆಯ ಸ್ಕೌಟ್ ಮತ್ತು ಬುಲ್ ಬುಲ್ ವಿಭಾಗವು ತೃತೀಯ ಸ್ಥಾನವನ್ನು ಹಾಗೂ ಗೈಡ್ಸ್ ವಿಭಾಗವು ಸಮಾಧಾನಕರ ಬಹುಮಾನವನ್ನು ಪಡೆದುಕೊಂಡಿದೆ.