ನೃತ್ಯ ಕ್ಷೇತ್ರದ ಸಾಧನೆಗಾಗಿ ಸೋನಾ ಅಡ್ಕಾರಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ

0

ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವಿರಾಜಪೇಟೆ, ಡಿವೈನ್ ಟೆಂಪಲ್ ಫೌಂಡೇಶನ್ ಬೆಂಗಳೂರು ಇದರ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೋನಾ ಅಡ್ಕಾರು ಅವರು ಯೋಗ ನೃತ್ಯ ಮತ್ತು ಜಾನಪದ ನೃತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಮಿನುಗುತಾರೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಈಕೆ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾದ್ಯಮ ಪ್ರೌಢಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದು, ಜಾಲ್ಸೂರು ಗ್ರಾಮದ ಅಡ್ಕಾರಿನ ಶರತ್ ಮತ್ತು ಶ್ರೀಮತಿ ಶೋಭಾ ದಂಪತಿಯ ಪುತ್ರಿ.