ಸುಳ್ಯ: ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯಲ್ಲಿ ರೋಟರಿ ವಿದ್ಯಾ ಸಂಸ್ಥೆಯ ಸ್ಕೌಟ್ಸ್ ಗೈಡ್ಸ್ ಹಾಗೂ ಬುಲ್ ಬುಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಆ.28 ರಂದು ರೋಟರಿ ವಿದ್ಯಾ ಸಂಸ್ಥೆಯಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ವತಿಯಿಂದ ಕಬ್ , ಬುಲ್-ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್-ರೇಂಜರ್ ವಿದ್ಯಾರ್ಥಿಗಳಿಗೆ ನಡೆದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯಲ್ಲಿ ರೋಟರಿ ವಿದ್ಯಾಸಂಸ್ಥೆಯ ಸ್ಕೌಟ್ಸ್- ಗೈಡ್ಸ್ ಹಾಗೂ ಬುಲ್ ಬುಲ್ ತಂಡಗಳ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಕಬ್ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.


ಇವರಿಗೆ ಕಬ್ ಮಾಸ್ಟರ್ ಪದ್ಮನಾಭ ಕೊಯಿನಾಡು, ಬುಲ್ ಬುಲ್ ಶಿಕ್ಷಕಿ ಶ್ರೀಮತಿ ರಶ್ಮಿ ಎಸ್ ಎನ್, ಸ್ಕೌಟ್ಸ್ ಮಾಸ್ಟರ್ ಶ್ರೀಹರಿ ಪೈಂದೋಡಿ, ಗೈಡ್ ಕ್ಯಾಪ್ಟನ್ ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ ತರಬೇತಿ ನೀಡಿರುತ್ತಾರೆ.