ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅ. 3ರಿಂದ‌ ಅ. 12ರ ತನಕ ಜರಗಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಆ. 28ರಂದು ನಡೆಯಿತು.
ಶ್ರೀಮತಿ ಹೇಮಾವತಿ ಮತ್ತು ವಿಠಲದಾಸ ಪಟೋಳಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಗೌರವಾಧ್ಯಕ್ಷ ಭಾಸ್ಕರ ಗೌಡ ಪಂಡಿ, ಶ್ರೀ ತ್ರಿಶೂಲಿನಿ ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ತುಳಸಿ ನಾಗೇಶ್ ಸೇರಿದಂತೆ ಬೈಲುವಾರು ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.