ಚೆಂಬು: ವರ್ಗಾವಣೆಗೊಂಡ ದಬ್ಬಡ್ಕ ಶಾಲಾ ಸಹಶಿಕ್ಷಕಿಗೆ ಬೀಳ್ಕೊಡುಗೆ

0

ಚೆಂಬು ಗ್ರಾಮದ ದಬ್ಬಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕಿ ಶ್ರೀಮತಿ ಸುಜಾತ ಅವರಿಗೆ ಶಾಲಾ ವತಿಯಿಂದ ಬೀಳ್ಕೊಡುಗೆ ಸಮಾರಂಭವು ಆ.28ರಂದು ನಡೆಯಿತು.

ಶ್ರೀಮತಿ ಸುಜಾತ ಅವರು ಕಳೆದ 17 ವರ್ಷಗಳಿಂದ ದಬ್ಬಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಕಡಬ ತಾಲೂಕಿನ ಕುದ್ಮಾರು ಸ.ಹಿ.ಪ್ರಾ.ಶಾಲೆಗೆ ವರ್ಗಾವಣೆ ಗೊಂಡಿದ್ದಾರೆ.

ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳು ಸೇರಿ ಶ್ರೀಮತಿ ಸುಜಾತ ಅವರನ್ನು ಸನ್ಮಾನಿಸಿ, ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಪೋಷಕರು, ಸಹಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಮತ್ತು ವಿಧ್ಯಾಭಿಮಾನಿಗಳು ಉಪಸ್ಥಿತರಿದ್ದರು

ಶಾಲಾ ಶಿಕ್ಷಕಿ ಶ್ರೀಮತಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಶ್ರೀಮತಿ ಹಂಸಕಲಾ ಸ್ವಾಗತಿಸಿದರು. ಶಿಕ್ಷಕ ಪ್ರಶಾಂತ್ ವಂದಿಸಿದರು.

ಶಿಕ್ಷಕಿ ಶ್ರೀಮತಿ ಸುಜಾತ ಅವರು ಶಾಲಾ ವಿದ್ಯಾರ್ಥಿಗಳಿಗೆ ಕಲಿಕೋಪಕರಣ ಹಾಗೂ ಶಾಲೆಗೆ ಫ್ಯಾನ್ ಕೊಡುಗೆಯಾಗಿ ನೀಡಿದರು.