ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷರಾಗಿ ಬುದ್ಧ ನಾಯ್ಕ್ ಅವಿರೋಧವಾಗಿ ಆಯ್ಕೆ

0

ಸುಳ್ಯ ನಗರ ಪಂಚಾಯತ್ 2ನೇ ಅವಧಿಗೆ ಅಧ್ಯಕ್ಷತೆಗೆ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷತೆಗೆ ಬುದ್ದ ನಾಯ್ಕರವರು ಆಯ್ಕೆ ಯಾಗಿದ್ದಾರೆ.
ಇಂದು ಬೆಳಿಗ್ಗೆ ನಾಮ ಪತ್ರ ಸಲ್ಲಿಸುವ ಪ್ರಕ್ರಿಯೆ ಸುಳ್ಯ ನ. ಪಂ ಸಭಾಂಗಣದಲ್ಲಿ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ಸ್ಪರ್ಧೆ ಮಾಡದ ಹಿನ್ನಲೆಯಲ್ಲಿ ಅವಿರೋಧವಾಗಿ ಅಧ್ಯಕ್ಷರಾಗಿ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷರಾಗಿ ಬುದ್ಧ ನಾಯ್ಕ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಗಳಾಗಿ ಸುಳ್ಯ ತಹಶೀಲ್ದಾರ್ ಮಂಜುನಾಥ್ ಕರ್ತವ್ಯ ನಿರ್ವಹಿಸಿದರು. ನ ಪಂ ಮುಖ್ಯಾಧಿಕಾರಿ ಸುಧಾಕರ್,ಡೆಪ್ಯೂಟಿ ತಹಶೀಲ್ದಾರ್ ಚಂದ್ರಕಾಂತ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕಿ ಕು.ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್. ಅಂಗಾರ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎ.ಟಿ.ಕುಸುಮಾದರ, ನಗರ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.