ದುಗ್ಗಲಡ್ಕ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

0


ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ ಇಂದು ನಡೆಯಿತು.
ಪಂದ್ಯಾಟದ ಉದ್ಘಾಟನೆಯನ್ನು ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎ.ನೀರಬಿದಿರೆ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷ ನಾರಾಯಣ ಬಿ.ವಹಿಸಿದ್ದರು.ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಮೇರ್ಕಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್, ದೈಹಿಕ ಶಿಕ್ಷಕ ವೆಂಕಟ್ರಮಣ ಕೆ.ಎಸ್., ಹಿರಿಯ ವಿದ್ಯಾರ್ಥಿ ಪ್ರದೀಪ್, ಎಸ್.ಡಿ.ಎಂ.ಸಿ.ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.


ವಿದ್ಯಾರ್ಥಿ ಅನನ್ಯ ಜಯರಾಜ್ ಪ್ರಾರ್ಥಿಸಿದರು. ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಸ್ವಾಗತಿಸಿ, ಶಿಕ್ಷಕ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿದರು.