ಸೈಂಟ್ ಜೋಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

0

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢಶಾಲೆ ದುಗಲಡ್ಕ ದಲ್ಲಿ ಆ. 30 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಾಲಕರ ತಂಡವು ವಿಜಯಿಯಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ಬೆಸ್ಟ್ ಆಲ್ರೌಂಡರ್ ಆಗಿ ಮಹಮ್ಮದ್ ಫೈಸ್ 10ನೇ ತರಗತಿ ವೈಯಕ್ತಿಕ ಬಹುಮಾನ ಪಡೆದರು.

ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ ತರಬೇತಿ ನೀಡಿದರು. ಸಹ ಶಿಕ್ಷಕಿ ಚೇತನ ತಂಡದ ವ್ಯವಸ್ಥಾಪಕರಾಗಿ ಸಹಕರಿಸಿದರು.