ಅಡ್ಕಾರು: ಅಂಜನಾದ್ರಿಯ ಆಂಜನೇಯ ಸನ್ನಿಧಿಯಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆಯು ಆ.31ರಂದು ನಡೆಯಿತು.

ಮಂಜೇಶ್ವರದ ಕುಬನೂರು ಶ್ರೀ ಸತ್ಯನಾರಾಯಣ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸೇವಾ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.