ಸುಳ್ಯ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

0

ರೋಟರಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸಮಗ್ರ,ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ದ್ವಿತೀಯ

ದ.ಕ. ಜಿ. ಪಂಚಾಯತ್,
ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಸಮೂಹ ಸಂಪನ್ಮೂಲ ಕೇಂದ್ರ ಸುಳ್ಯ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇದರ ಆಶ್ರಯದಲ್ಲಿ ಸುಳ್ಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮ ನೆರವೇರಿತು.


ನಗರ ಪಂಚಾಯತ್ ಸದಸ್ಯರಾದ ಡೇವಿಡ್ ಧೀರಾ ಕ್ರಾಸ್ತಾ ಇವರು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ,
ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪೋಷಕರ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಚಾತುಬಾಯಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಶ್ರೀಮತಿ ಆಶಾ ನಾಯಕ್ , ಶ್ರೀಮತಿ ಲತಾಮಧುಸೂಧನ್ ಕಸ್ತೂರಿ ನರ್ಸರಿಯ ಮ್ಹಾಲಕರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕರಾದ ಶ್ರೀಮತಿ ಧನಲಕ್ಷ್ಮಿ , ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರಮ್ಯಾ ಹಾಗೂ ಸುಂದರ್,ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಅನುರಾಧ ಇವರು ಉಪಸ್ಥಿತರಿದ್ದರು.


ಪ್ರತಿಭಾ ಕಾರಂಜಿಯ ಸ್ಪರ್ಧೆಗಳು ಸುಸೂತ್ರವಾಗಿ ನೆರವೇರುವುದರೊಂದಿಗೆ ಹಿರಿಯರ ವಿಭಾಗ ಮತ್ತು ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರವನ್ನು ರೋಟರಿ ಆಂಗ್ಲ ಮಾಧ್ಯಮ ಶಾಲೆ ,ಕಿರಿಯರ ವಿಭಾಗ ಮತ್ತು ಹಿರಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಸುಳ್ಯ ಇವರು ಪಡೆದುಕೊಂಡರು.ವೈಯಕ್ತಿಕ‌ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ . ಇವರು ಪ್ರಮಾಣಪತ್ರ ಮತ್ತು ಪದಕಗಳನ್ನು ನೀಡಿದರು. ಪ್ರತಿ ವರ್ಷದಂತೆ 2024 ರ ಸಾಲಿನ ಸಮಗ್ರ ಮತ್ತು ಬಹುಮಾನಗಳನ್ನು ಸುಳ್ಯ ಮತ್ತು ಅರಂತೋಡು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಮಮತಾ ರವೀಶ್ ರವರು ಕೊಡುಗೆಯಾಗಿ ನೀಡಿ ಸಮಗ್ರ ಪಡೆದ ಶಾಲೆ ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಸ್ಪರ್ಧಾ ಕಾರ್ಯಕ್ರಮಕ್ಕೆ ಸೋಣಂಗೇರಿ ಮತ್ತು ಬೆಳ್ಳಾರೆ ಕ್ಲಸ್ಟರ್ ನ ಶಿಕ್ಷಕರು ನಿರ್ಣಾಯಕರಾಗಿ ಕರ್ತವ್ಯ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಇಲಾಖಾಧಿಕಾರಿಗಳು, ಶಿಕ್ಷಕರು, ಪೋಷಕರು, ಶಾಲಾ ಪೋಷಕ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಸಿಸ್ಟರ್ ಆಂಟೋನಿ ಮೇರಿ ಇವರು ಸ್ವಾಗತಿಸಿ, ಕಾರ್ಯಕ್ರಮದ ಸಂಯೋಜಕರಾದ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ ರವೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು ಹಾಗೂ ಸ.ಉ.ಹಿ.ಪ್ರಾ ಶಾಲೆಯ ಶಿಕ್ಷಕಿ ಶ್ರೀಮತಿ ಮಮತಾ ಎಸ್ ಕೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.