ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇದರ ವತಿಯಿಂದ ದುಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಆಗಸ್ಟ್ 30 ರಂದು ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಬಾಲಕರ ಮತ್ತು ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.


ಬಾಲಕರ ವಿಭಾಗದಲ್ಲಿ ನಿಶಾಂತ್ ಮತ್ತು ಬಾಲಕಿಯರ ವಿಭಾಗದಲ್ಲಿ ದೀಪಿಕಾ ಉತ್ತಮ ಹೊಡೆತಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ತಂಡದ ತರಬೇತುದಾರರಾಗಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗೋಪಾಲ್ ಎನೆಕಲ್ ಸಹಕರಿಸಿದ್ದರು.