ದೇವಚಳ್ಳ : ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ

0

“ರಕ್ತದಾನ ಮಾಡುವುದರಿಂದ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ ಮಾತ್ರವಲ್ಲದೆ, ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದು, 18 ರಿಂದ 60 ವಯಸ್ಸಿನ ಆರೋಗ್ಯವಂತ ವ್ಯಕ್ತಿಗಳು ಲಿಂಗ ಭೇದವಿಲ್ಲದೆ ರಕ್ತ ಮಾಡಬಹುದು” ಎಂದು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಅಧ್ಯಕ್ಷರಾದ ಡಾ. ಸೀತಾರಾಮ ಭಟ್ ತಿಳಿಸಿದರು. ಇವರು ಸೆ.1ರಂದು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆದ ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಚಳ್ಳ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ವಹಿಸಿದ್ದರು.

ಅತಿಥಿಗಳಾಗಿ ರೋಟರಿ ಕ್ಲಬ್ ಪುತ್ತೂರಿನ ಪೂರ್ವಾಧ್ಯಕ್ಷರಾದ ಉಮಾನಾಥ್ ಪಿ ಬಿ, ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾಕ್ಟರ್ ಸುಯೋಗ್, ಸುಳ್ಯ ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾದ ರಾಮಕೃಷ್ಣ ರೈ, ಕಾರ್ಯದರ್ಶಿಗಳಾದ ರಾಮಚಂದ್ರ ಪಲ್ಲತಡ್ಕ, ಪೂರ್ವಾಧ್ಯಕ್ಷರಾದ ವೀರಪ್ಪಗೌಡ, ಲಯನ್ ದೇವಿಪ್ರಸಾದ ಕುದ್ಪಾಜೆ, ಆರೋಗ್ಯ ಇಲಾಖೆ ಶ್ರೀಮತಿ ಕುಸುಮಾವತಿ ಜಯಪ್ರಕಾಶ್, ದೇವಚಳ್ಳ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಧನಂಜಯ ಬಾಳೆತೋಟ, ಚಿರಾಯು ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಪ್ರವೀಣ್ ಮಾವಿನಕಟ್ಟೆ ಭಾಗವಹಿಸಿದ್ದರು.


ಗ್ರಾಮ ಪಂಚಾಯತ್ ದೇವಚಳ್ಳ, ಲಯನ್ಸ್ ಕ್ಲಬ್ ಸುಳ್ಯ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಚಿರಾಯು ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿ ಸಂಘದ ಸರಕಾರಿ ಪ್ರೌಢಶಾಲೆ ಎಲಿಮಲೆ ಇದರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ನಂತರ ನಡೆದ ರಕ್ತದಾನ ದಲ್ಲಿ ಸುಳ್ಯ ತಹಸೀಲ್ದಾರ್ ಮಂಜುನಾಥ್ ಹಾಗೂ ಮಹಿಳೆಯರು ಸೇರಿದಂತೆ 53 ಜನ ರಕ್ತದಾನ ಮಾಡಿದ್ದು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಟೆಕ್ನಿಷನ್ ಸಜಿನಿ ಮಾರ್ಟೀಸ್ ಮತ್ತು ತಂಡದವರು ಸಹಕರಿಸಿದ್ದರು. ಆರೋಗ್ಯ ಇಲಾಖೆಯ ಸಮುದಾಯದ ಆರೋಗ್ಯ ವೈದ್ಯಾಧಿಕಾರಿಗಳಾದ ಕು.ಮೋನಿಷಾ, ಕು. ಧನ್ಯ, ಅರೋಗ್ಯ ಸಹಾಯಕಿ ಕುಸುಮ ಜಯಪ್ರಕಾಶ್ ಹಾಗೂ ಆಶಾ ಕಾರ್ಯಕರ್ತೆಯರು ಅರೋಗ್ಯ ತಪಾಸಣೆ ನಡೆಸಿಕೊಟ್ಟರು. ಪ್ರಸಾದ್ ನೇತ್ರಾಲಯದ ಪಿ ಆರ್ ಓ ಸಯ್ಯದ್ ಮತ್ತು ತಂಡದವರು ಕಣ್ಣಿನ ಪರೀಕ್ಷೆ ನಡೆಸಿದರು. ಗ್ರಾಮ ಒನ್ ದೇವಚಳ್ಳ ಇದರ ಲೋಹಿತ್ ಮಾವಿನಗೊಡ್ಲು ಮತ್ತು ಸಿಬ್ಬಂದಿ ಗಳಿಂದ ಅಂಚೆ ಇಲಾಖೆಯ ಮಾಹಿತಿ, ಡಿಜಿಟಲ್ ಖಾತೆ ಹಾಗೂ ವಿಮೆಗಳನ್ನು ಮಾಡಿಸಿಕೊಟ್ಟರು. ಶಿಕ್ಷಕರಾದ ಮುರಳೀಧರ ಪುನುಕುಟ್ಟಿ ಧನ್ಯವಾದ ಅರ್ಪಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಅಂಬೆಕಲ್ಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.