ಅರಂಬೂರು: ಜಗದೀಶ್ ಸರಳಿಕುಂಜ ಮನೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ

0

ಸುಳ್ಯದ ಮೊಸರು ಕುಡಿಕೆ ಉತ್ಸವದಲ್ಲಿ ಭಾಗವಹಿಸಲು ಸೆ.4ರಂದು ಅಪರಾಹ್ನ ಸುಳ್ಯಕ್ಕೆ ಆಗಮಿಸಿದ ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಅರಂಬೂರಿನ ಜಗದೀಶ್ ಸರಳಿಕುಂಜ ಅವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಎ.ವಿ. ತೀರ್ಥರಾಮ, ಆಲೆಟ್ಟಿ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷೆ ಶ್ರೀಮತಿ ಭಾರತಿ ಪುರುಷೋತ್ತಮ ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರುಗಳು, ಮೊಸರು ಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.