ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ನೂತನ ದಂತ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ -2024

0

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ನೂತನ ಸ್ನಾತಕೋತ್ತರ ದಂತ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಸೆ. 4ರಂದು ನಡೆಯಿತು.

ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಡೆಂಟಲ್ ಕಾಲೇಜಿನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮೌರ್ಯ ಆರ್. ಕುರುಂಜಿ ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಕಾಲೇಜಿನ ವತಿಯಿಂದ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಎ.ಓ.ಎಲ್.ಇ. ಕಮಿಟಿ (ಬಿ) ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಎಲ್ಲಾ ವಿಭಾಗ ಮುಖ್ಯಸ್ಥರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ವಿಭಾಗಗಳ ಕಾರ್ಯಚಟುವಟಿಕೆಗಳ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಡಾ. ಸುಪ್ರೀಯಾ ಹೆಚ್. ವಂದನಾರ್ಪಣೆಗೈದರು. ಡಾ. ಮನೀಶಾ ರೈ ಕಾರ್ಯಕ್ರಮವನ್ನು ನಿರೂಪಿಸಿದರು.