ಬಳ್ಪ ಗ್ರಾ.ಪಂ.ನ 2023-24 ನೇ ಸಾಲಿನ ವಾರ್ಷಿಕ ಜಮಾಬಂದಿ

0

ಬಳ್ಪ ಗ್ರಾ.ಪಂ. 2023-24ನೇ ಸಾಲಿನ ವಾರ್ಷಿಕ ಜಮಾಬಂಧಿ ಆ. 04 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಮಾಬಂದಿ ಅಧಿಕಾರಿಯಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಜಾ ವಹಿಸಿದ್ದರು. ಪಂಚಾಯತ್ ಕಾರ್ಯದರ್ಶಿ ರಘು. ಎನ್. ಬಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಬಿ ಮತ್ತು ಪಂಚಾಯತ್ ಸಿಬ್ಬಂದಿ ಯೋಗೀಶ್ ಕೆ ಜಮಾಬಂದಿ ವರದಿಯನ್ನು ವಾಚಿಸಿದರು.

ಗ್ರಾ.ಪಂ. ಅಧ್ಯಕ್ಷರಾದ ಹರ್ಷಿತ ಕಾರ್ಜ ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪಾರ್ವತಿ ಪಿ.ಡಿ, ಸದಸ್ಯರುಗಳಾದ ಶ್ರೀಮತಿ ನೇತ್ರಾವತಿ ಹೊಪ್ಪಾಳೆ, ಶ್ರೀಮತಿ ಶೈಲಜಾ ಎಣ್ಣೆಮಜಲು, ರಾಜೀವ ಕಣ್ಕಲ್, ಶ್ರೀಮತಿ ಶಶಿಕಲಾ ಸೂಂತಾರು, ತಾಲೂಕು ಕಿರಿಯ ತಾಂತ್ರಿಕ ಅಭಿಯಂತರಾದ ಜನಾರ್ಧನ, ಬಳ್ಪ ಸ.ಉ.ಹಿ.ಪ್ರಾ. ಶಾಲಾ ಮುಖ್ಯ್ಯೋಪಾಧ್ಯಾಯಿನಿ ಶ್ರೀಮತಿ ಗಿರಿಜ, ಬಳ್ಪ ಗ್ರಾಮ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ವಿನೋದ್ ಬೊಳ್ಮಲೆ ಸೇರಿದಂತೆ ಶಾಲಾ ಸಹ ಶಿಕ್ಷಕರು, ಸಂಜೀವಿನಿ ಸಂಘದ ಅಧ್ಯಕ್ಷರು, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.