ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ. ಸರ್ವಪಳ್ಳಿ ರಾಧಾಕೃಷ್ಣ ಅವರಿಗೆ ಶಿಕ್ಷಕರ ದಿನಾಚರಣೆ ಸಲುವಾಗಿ ನುಡಿನಮನ

0

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೆ.5 ರಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಆಚರಿಸಲಾಗುವ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ.ಯವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ನುಡಿನಮನ ಸಲ್ಲಿಸಿದರು ಹಾಗೂ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿ ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಶುಭಾಶಯ ಕೋರಿದರು ಹಾಗೂ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅವರು ಮಾತನಾಡಿ ಜೀವನದ ಪಾಠವನ್ನು ಕಲಿಸಿಕೊಡುವ ಶಿಕ್ಷಕರಿಗೆ ಇದೊಂದು ಬಹುಮುಖ್ಯ ದಿನವೆಂದು ಶಿಕ್ಷಕರ ದಿನಾಚರಣೆಯ ಶುಭಾಶಯವನ್ನು ಕೋರಿದರು.

ಸಂಸ್ಥೆಯ ಹಿರಿಯ ಪ್ರಾಧ್ಯಾಪಕರು ಹಾಗೂ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ. ಅವರು ಮಾತನಾಡಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದು ಇವರು ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ತಿಳಿಸಿ ಶಿಕ್ಷಕರಿಗೆ ಶುಭಾಶಯ ಕೋರಿದರು. ಎಲ್ಲಾ ವಿಭಾಗಗಳ ಮುಖ್ಯಸ್ಥರು, ಡೀನ್‌ಗಳು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.