ಅರಂತೋಡು: ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ

0

ಅರಂತೋಡಿನ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕದ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹುಟ್ಟುಹಬ್ಬದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸೆ.5ರಂದು ಆಚರಿಸಲಾಯಿತು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಅವರು ಶಿಕ್ಷಕ ದಿನಾಚರಣೆಯ ಸಂದೇಶವನ್ನು ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು.ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ. ಮತ್ತು ಭಾಗ್ಯಶ್ರೀ ಉಪಸ್ಥಿತರಿದ್ದರು.


ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.