ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ, ಸನ್ಮಾನ

0

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ, ಸನ್ಮಾನ ಸೆ. 4ರಂದು ಜೆಡಿ ಅಡಿಟೋರಿಯಂನಲ್ಲಿ ಆಚರಿಸಲಾಯಿತು. ನಿವೃತ್ತ ಶಿಕ್ಷಕ ಶ್ರೀಧರ ಹಾಗೂ ಸುಭದ್ರ ದಂಪತಿಗಳನ್ನು ಕ್ಲಬ್ಬಿನ ವತಿಯಿಂದ ಸನ್ಮಾನಿಸಲಾಯಿತು. ಕ್ಲಬ್‌ನ ಅಧ್ಯಕ್ಷೆ ಶ್ರೀಮತಿ ಉಷಾ ಬಿ. ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಬಳಿಕ ಶಿಕ್ಷಕರ ದಿನಾಚರಣೆಯ ಕುರಿತು ಶ್ರೀಧರ್ ಮಾತನಾಡಿದರು. ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.