ಸೆ.7ರಂದು ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ -2024 ಆಮಂತ್ರಣ ಪತ್ರಿಕೆ ಬಿಡುಗಡೆ

0

ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ಸೆ.7ರಂದು ಗಣೇಶ ಚತುರ್ಥಿಯ ದಿನ ನಡೆಯಲಿದೆ.

ಶಾಸಕಿ ಭಾಗೀರಥಿ ಮುರುಳ್ಯ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿರಲಿದ್ದಾರೆ.