ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ

0

ಕೊಡಗು ಸಂಪಾಜೆ ಗ್ರಾಮದ ಕೊಯನಾಡಿನ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಆಚರಣೆಯು ಸೆ‌.7ರಂದು ಬೆಳಿಗ್ಗೆ ನಡೆಯಿತು.

ಗಣೇಶ ಚತುರ್ಥಿ ಪ್ರಯುಕ್ತ ಮಹಾಗಣಪತಿ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಜರುಗಿತು. ಈ ಸಂದರ್ಭದಲ್ಲಿ ಸಂಪಾಜೆ ಹಾಗೂ ಕೊಯನಾಡು ಪರಿಸರದ ಭಕ್ತಾದಿಗಳು ಉಪಸ್ಥಿತರಿದ್ದರು.