ಬೆಳ್ಳಾರೆ : ವಿರಾಟ್ ಫ್ರೆಂಡ್ಸ್ ವತಿಯಿಂದ 53 ನೇ ವರ್ಷದ ಶ್ರೀ ಗಣೇಶೋತ್ಸವ ಪ್ರಾರಂಭ

0

ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ ,ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ 53 ನೇ ವರ್ಷದ ಶ್ರೀ ಗಣೇಶೋತ್ಸವ ಸೆ.07 ರಿಂದ ಪ್ರಾರಂಭಗೊಂಡಿದ್ದು ಸೆ.08 ರವರೆಗೆ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಸೆ.07 ರಂದು ಬೆಳಿಗ್ಗೆ ಗಂಟೆ 8.00 ಶ್ರೀ ಗಣಪತಿ ಪ್ರತಿಷ್ಠೆ ನಡೆಯಿತು.
ಬಳಿಕ ಶ್ರೀ ಮಹಾಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ ನಡೆಯಿತು.


ಪೂರ್ವಾಹ್ನ ಸ್ಪರ್ಧೆಗಳು ಗಣಪತಿ ಹವನ,12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು.
ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ಸಂಜೆ 6.00 ಕ್ಕೆ ಧಾರ್ಮಿಕ ಸಭೆ, ರಾತ್ರಿ ಗಂಟೆ 8.00 ಕ್ಕೆ ರಂಗಪೂಜೆ,ಮೂಡಸೇವೆ,ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ 9.30 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ 5.00 ರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.


ಸೆ.08 ರಂದು ಪೂರ್ವಾಹ್ನ ಗಂಟೆ 8.00 ಕ್ಕೆ ಶ್ರೀ ಗಣಪತಿ ಅಥರ್ವಶೀರ್ಷ ಹವನ,9.00 ಕ್ಕೆ ಭಜನಾ ಕಾರ್ಯಕ್ರಮ, 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಅಪರಾಹ್ನ ಗಂಟೆ 1.00 ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.
ಬಳಿಕ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಾಯಂಕಾಲ ಗಂಟೆ 4.00ಕ್ಕೆ ಮಹಾಪೂಜೆ,ಮಂಗಳಾರತಿ,ಪ್ರಸಾದ ವಿತರಣೆ ನಡೆಯಲಿದೆ.
ಸಾಯಂಕಾಲ ಗಂಟೆ 5.00 ಕ್ಕೆ ವೈಭವದ ಶೋಭಾಯಾತ್ರೆ ನಡೆಯಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ
ಸೆ.07 ರಂದು ರಾತ್ರಿ ಗಂಟೆ 9.30 ರಿಂದ ಡಾನ್ಸ್ & ಬೀಟ್ಸ್ ಹಾಗೂ ಇತರ ಶಾಖೆಗಳ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.