ಅರಂತೋಡು: ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟವು ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.9ರಂದು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಅರಂತೋಡು ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷ ಸುರೇಶ್ ಯು. ಕೆ. ಉಳುವಾರು ಅವರು ಅಧ್ಯಕ್ಷತೆ ವಹಿಸಿದ್ದರು.


ಕಾರ್ಯಕ್ರಮವನ್ನು ಅರಂತೋಡು – ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರು ಉದ್ಘಾಟಿಸಿ, ಶುಭಹಾರೈಸಿದರು.


ದೈಹಿಕ ಶಿಕ್ಷಣ ಪರಿವೀಕ್ಷಕ ಅಧಿಕಾರಿ ಆಶಾ ನಾಯಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.


ವೇದಿಕೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮಾಲಿನಿ ವಿನೋದ್ ಉಳುವಾರು ,ಪುಷ್ಪಾದರ ಕೊಡಂಕೆರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯಕ್, ದೈಹಿಕ ಶಿಕ್ಷಕಿ ಸರಸ್ವತಿ ,ನಿವೃತ್ತ ಶಿಕ್ಷಕರಾದ ತೀರ್ಥರಾಮ ,ಹೊನ್ನಪ್ಪ ಆಡ್ತಲೆ, ಶಿಕ್ಷಣ ಸಂಯೋಜಕಾದ ಸಂಧ್ಯಾ, ದೈಹಿಕ ಶಿಕ್ಷಕ ಧನಂಜಯ ಸೇರಿದಂತೆ ಮತ್ತಿತರರು ಉಪಸ್ಥಿರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ ಸ್ವಾಗತಿಸಿ, ರಮ್ಯ ವಂದಿಸಿದರು. ಶಿಕ್ಷಕಿ ಭಾನುಮತಿ ಕಾರ್ಯಕ್ರಮ ನಿರೂಪಿಸಿದರು.