ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜಿನ ಬಾಲಕರ ತ್ರೋಬಾಲ್ ತಂಡ ಜಿಲ್ಲಾ ಮಟ್ಟಕ್ಕೆ

0

ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಮತ್ತು ನೆಹರೂ ಮೆಮೋರಿಯಲ್ ಕಾಲೇಜು ಅರಂತೋಡು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ತ್ರೋಬಾಲ್ ಪಂದ್ಯಾಟದಲ್ಲಿ ನಿಂತಿಕಲ್ಲಿನ ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ.
ವಿಜೇತ ತಂಡಕ್ಕೆ ಸಂಸ್ಥೆಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೆ.ಎಸ್, ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ ಅಭಿನಂದಿಸಿದರು. ವಿಜೇತ ತಂಡಕ್ಕೆ ಉಪನ್ಯಾಸಕರಾದ ಉಜ್ವಲ್ ಕೆ.ಎಚ್, ಉಪನ್ಯಾಸಕಿ ಸಮೀಕ್ಷಾ ತರಬೇತಿ ನೀಡಿದ್ದಾರೆ.