ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಎಲಿಮಲೆ ಜ್ಞಾನದೀಪದ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

0


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೈಲಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೈಲಾರಿನಲ್ಲಿ ನಡೆದ ದೇವಚಳ್ಳ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ಜ್ಞಾನದೀಪ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಅತಿ ಹೆಚ್ಚು ಬಹುಮಾನಗಳನ್ನು ಪಡೆದು ಹಿರಿಯರ ವಿಭಾಗದಲ್ಲಿ ಸಮಗ್ರ ಪ್ರಥಮ ಹಾಗೂ ಕಿರಿಯರ ವಿಭಾಗದಲ್ಲಿ ಸಮಗ್ರ ದ್ವಿತೀಯ ಪ್ರಶಸ್ತಿ ಯೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದು, ಹಲವು ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿರುತ್ತಾರೆ.