ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ರೋಟರಿ ಪ್ರೌಢಶಾಲೆಗೆ ಸಮಗ್ರ ದ್ವಿತೀಯ

0

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಶಾರದಾ ಅನುದಾನಿತ ಪ್ರೌಢಶಾಲೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಸುಳ್ಯ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಿತ್ತಡ್ಕ ಇಲ್ಲಿಯ 6 ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.5 ವಿದ್ಯಾರ್ಥಿಗಳು ದ್ವಿತೀಯ ಮತ್ತು 4 ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಗಳಿಸಿ ಸಮಗ್ರ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡು ಉತ್ತಮ ಸಾಧನೆಯನ್ನು ಮಾಡಿದ್ದಾರೆ.