ರೋಟರಿ ಕ್ಲಬ್ ಸುಬ್ರಹ್ಮಣ್ಯ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ “ನಂದನ ವನ”

0

ರೋಟರಿ ಕ್ಲಬ್ ಸುಬ್ರಹ್ಮಣ್ಯ ,
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ, ಸೆ.12 ರಂದು ಮಿಯವಕಿ ಮೆಥಡ್ ಆಫ್ ಎ ಫಾರೆಸ್ಟ್ ಸ್ಟೇಷನ್ ಇದರ ವತಿಯಿಂದ ಗಿಡ ನೆಡುವ ಕಾರ್ಯಕ್ರಮ “ನಂದನ ವನ” ಸೆ.13 ರಂದು ಎಸ್.ಎಸ್.ಪಿ.ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಾಮಶರ್ಮ ರು ತಮ್ಮ ತೋಟದಲ್ಲಿ 150 ಜಾತಿ ಗಿಡ ನಡೆಸಿ ಕಾರ್ಯಕ್ರಮ ಉದ್ಘಾಟಿಸಿದರು.

ಉಡುಪಿ ಕಟಪಾಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪರಿಸರವಾದಿ ಕೆ. ಮಹೇಶ್ ಶೆಣೈ ಪಿ ಸಂಪನ್ಮೂಲ ವ್ಯಕ್ತಿಯಾಗಿ . ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ಚಂದ್ರಶೇಖರ ನಾಯರ್ ಅಧ್ಯಕ್ಷತೆ ವಹಿಸಿದ್ದರು.‌

ಸಿ ಸೀನಿಯರ್ ಚೇಂಬರ್ ಅಧ್ಯಕ್ಷರಾದ ರವಿ‌ಕ‌ಕ್ಕಪದವು , ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಶೃತಿ ಮಂಜುನಾಥ , ಬ್ಯಾಂಕ್ ಆಫ್ ಬರೋಡಾ ವಿಶ್ರುತ್ ಕುಮಾರ್, ಉಪ ವಲಯಾರಣ್ಯಧಿಕಾರಿ ಮನೋಜ್ ಕುಮಾರ್, ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ.ಸಂಃದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು ಉಪಸ್ಥಿತರಿದ್ದರು. ಕೆ.ಎಸ್.ಎಸ್ ಕಾಲೇಜಿನ ಉಪನ್ಯಾಸಕರಾದ ಆರತಿ ಕೆ ಹಾಗೂ ಸುಮಿತ್ರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಭರತ್ ನೆಕ್ರಾಜೆ ಸ್ವಾಗತಿಸಿ ಶಿವರಾಮ ವಂದಿಸಿದರು.. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು 150ಕ್ಕೂ ಅಧಿಕ ಗಿಡ ನೆಟ್ಟರು.