ಅರಂತೋಡು – ತೊಡಿಕಾನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಸದಸ್ಯರುಗಳಿಗೆ ಶೇ.12 ಡಿವಿಡೆಂಡ್ ವಿತರಣೆ

0

214 ಕೋಟಿ ವಾರ್ಷಿಕ ವ್ಯವಹಾರ 49 ಕೋಟಿ ದುಡಿಯುವ ಬಂಡವಾಳ ಒಟ್ಟು 52,05,488 ಲಕ್ಷ ನಿವ್ವಳ ಲಾಭ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023 – 24ನೇ ಸಾಲಿನ ವಾರ್ಷಿಕ ಮಹಾಸಭೆಯು ಅರಂತೋಡಿನ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೆ.15ರಂದು ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ಅವರು ವಾರ್ಷಿಕ ವರದಿ ಮಂಡಿಸಿದರು.

ಈ ಸಂದರ್ಭದಲ್ಲಿ ಸಹಕಾರಿ ಸಂಘದ ಸದಸ್ಯರಾಗಿದ್ದು, ಮೃತಪಟ್ಟ ಸದಸ್ಯರುಗಳಿಗೆ ಸಂತಾಪ ಸೂಚಿಸಲಾಯಿತು. ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರು ಮಾತನಾಡಿ ಸಹಕಾರಿ ಸಂಘವು 2023 – 24ನೇ ಸಾಲಿನಲ್ಲಿ ಒಟ್ಟು 214 ಕೋಟಿಯಷ್ಟು ವ್ಯವಹಾರ ಮಾಡಿ 49 ಕೋಟಿ ದುಡಿಯುವ ಬಂಡವಾಳ ಹೊಂದಿದ್ದು, 52,05,_488 ಲಕ್ಷ ರೂ. ನಿವ್ವಳ ಲಾಭ ಪಡೆದಿದ್ದು, ಸದಸ್ಯರುಗಳಿಗೆ ಈ ಬಾರಿ ಶೇಕಡಾ 12 % ಡಿವಿಡೆಂಡ್ ವಿತರಿಸಲಾಗುವುದು ಎಂದು ಘೋಷಿಸಿದರು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಅಧಿಕ ಅಂಕ ಪಡೆದ ಸಹಕಾರಿ ಸಂಘದ ಸದಸ್ಯರುಗಳ ಮಕ್ಕಳಿಗೆ ವಿದ್ಯಾನಿಧಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಹಕಾರಿ ಸಂಘದ ವತಿಯಿಂದ ನಡೆಸಲ್ಪಡುವ ಸಮೃದ್ಧಿ ಮಾರ್ಟ್ ನಲ್ಲಿ ಅತೀ ಹೆಚ್ಚು ವ್ಯವಹಾರ ನಡೆಸಿದ ಸದಸ್ಯರುಗಳನ್ನು , ಸಹಕಾರಿ ಸಂಘದ ಹಿರಿಯ ಸದಸ್ಯರುಗಳನ್ನು ಹಾಗೂ ಅಂಬ್ಯುಲೆನ್ಸ್ ಚಾಲಕರನ್ನು ಸನ್ಮಾನಿಸಿ, ಗೌರವಿಸಲಾಯಿ
ತು.

ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ನಿರ್ದೇಶಕರುಗಳಾದ ವಿನೋದ್ ಕುಮಾರ್ ಉಳುವಾರು, ಚಂದ್ರಶೇಖರ ಚೋಡಿಪಣೆ, ಕುಸುಮಾಧರ ಅಡ್ಕಬಳೆ, ನಿಧೀಶ್ ಎ., ಸಂತೋಷ್ ಚಿಟ್ಟನ್ನೂರು, ಶ್ರೀಮತಿ ಭಾರತಿ ಪಿ., ಶ್ರೀಮತಿ ಚಿತ್ರಾ ಶಶಿಧರ ದೇರಾಜೆ, ಸೋಮಯ್ಯ ಹೆಚ್., ಗಣೇಶ್ ಕರಿಂಬಿ, ಪರಿಣತ ನಿರ್ದೇಶಕರುಗಳಾದ ವಿಜೇತ್ ಮರುವಳ, ಕೇಶವ ಅಡ್ತಲೆ, ವಲಯ ಮೇಲ್ವಿಚಾರಕ ಬಾಲಕೃಷ್ಣ ಪುತ್ಯ ಉಪಸ್ಥಿತರಿದ್ದರು.

ಸಭೆಯಲ್ಲಿ ಸಹಕಾರಿ ಸಂಘದ ಸದಸ್ಯರುಗಳು, ಮಾಜಿ ಅಧ್ಯಕ್ಷರುಗಳು, ಮಾಜಿ ಉಪಾಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಹಕಾರಿ ಸಂಘದ ಸಿಬ್ಬಂದಿಗಳು ಸಹಕರಿಸಿದರು.