ಪಂಜ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನ ಶೌಚಾಲಯ ಕಾಮಗಾರಿಗೆ ಗುದ್ದಲಿ ಪೂಜೆ

0

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರು ರಿಫೈನರಿ ಆಂಡ್ ಪೆಟ್ರೋ ಕೆಮಿಕಲ್ ಲಿಮಿಟೆಡ್ ಪ್ರಾಯೋಜಿತ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಶೌಚಾಲಯ ನಿರ್ಮಾಣ ಗೊಳ್ಳಲ್ಲಿದ್ದು ಕಾಮಗಾರಿಗೆ ಗುದ್ದಲಿ ಪೂಜೆ ಸೆ.16 ರಂದು ನಡೆಯಿತು.

ಶಾಸಕಿ ಕು.ಭಾಗೀರಥಿ ಮುರುಳ್ಯ ಗುದ್ದಲಿ ಪೂಜೆ ನೆರವೇರಿಸಿ ಶುಭ ಹಾರೈಸಿದರು.

ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ನೇರಳ, ಪೂರ್ವ ಪ್ರಾಥಮಿಕ ಶಾಲಾ ಸ್ಥಾಪಕಾಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಲಿಗೋಧರ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ದೇರಾಜೆ, ಮುಖ್ಯ ಶಿಕ್ಷಕಿ ಶ್ರೀಮತಿ ಲೀಲಾ ಕುಮಾರಿ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮೀ ನೆಕ್ಕಿಲ, ಕಾಮಗಾರಿ ಗುತ್ತಿಗೆದಾರ ಶಬೀರ್ ಯಂ ಯಸ್ ಬಾಳಿಲ, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು ,ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುರುಷೋತ್ತಮ ಕರಿಮಜಲು ಪ್ರಾರ್ಥಿಸಿದರು..ಶ್ರೀಮತಿ ಲೀಲಾ ಕುಮಾರಿ ಸ್ವಾಗತಿಸಿದರು. ಸೋಮಶೇಖರ ನೇರಳ ವಂದಿಸಿದರು.