ಬೆಳ್ಳಾರೆ : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ – ರಾಷ್ಟ್ರೀಯ ಪೋಷಣ್ ಮಾಸಾಚರಣೆ

0

ಕರ್ನಾಟಕ ಸರ್ಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಮತ್ತು ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಈ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ, ರಾಷ್ಟೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ್ ಮಾಸಾಚರಣೆ ಹಿಮೋಗ್ಲೋಬಿನ್ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ ಎಲ್ ರೈ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಇವರು ಉದ್ಘಾಟಿಸಿ ಮಾತನಾಡಿದರು.

ಪುತ್ತೂರು ಉಪ ವಿಭಾಗದ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ ಮಂಗಳೂರು ಉಪನಿರ್ದೇಶಕರಾದ ಉಸ್ಮಾನ್ ಎ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ ಎಂ ವಿಶೇಷ ಆಹ್ವಾನಿತರಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿಜಯಾ ಹೋಮಿಯೋ ಕ್ಲಿನಿಕ್ ಬೆಳ್ಳಾರೆಯ ವೈದ್ಯರಾದ ಡಾ. ವರ್ಷಿಣಿ ಶೆಣೈ ಸಂಪನ್ಮೂಲ ವ್ಯಕ್ತಿಯಾಗಿ ರಕ್ತ ಹೀನತೆ ಮತ್ತು ಮಕ್ಕಳ ಬಾಲ್ಯದ ಆರೈಕೆ ವಿಷಯದ ಬಗ್ಗೆ ಅರೋಗ್ಯ ಮಾಹಿತಿ ನೀಡಿದರು, ಮುಖ್ಯ ಅತಿಥಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಳ್ಯ ಶೈಲಜಾ ಬಿ ಇವರು ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು, ಪ್ರಾಥಮಿಕ ಅರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ಕಿರಣ್ ಯು, ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಪದ್ಮನಾಭ ಬೀಡು, ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ ವಿ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಅಧ್ಯಕ್ಷರಾದ ನಿಶ್ಮಿತಾ ಬೀಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಕಿಶೋರಿಯರಿಗೆ ಆರೋಗ್ಯ ಮಾಹಿತಿ ನೀಡಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಅತ್ಯುತ್ತಮ ಸ್ತ್ರೀ ಶಕ್ತಿ ಗುಂಪು ಎಂದು ಕರ್ನಾಟಕ ಸರ್ಕಾರದಿಂದ ಕೊಡಲ್ಪಡುವ ರಾಜ್ಯ ಪ್ರಶಸ್ತಿಗೆ ಪುರಸ್ಕೃತರಾದ ಬೆಳ್ಳಾರೆ ಗ್ರಾಮದ ಕಲ್ಲೋಣಿ ಸ್ತ್ರೀ ಶಕ್ತಿ ಗುಂಪು ಇದರ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರನ್ನು ಅಭಿನಂದಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಭಾರತ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪೋಷಣ್ ಅಭಿಯಾನ ಯೋಜನೆಯಡಿ ಗರ್ಭಿಣಿ ಸ್ತ್ರೀ ಯರಿಗೆ ಸೀಮಂತ ಕಾರ್ಯಕ್ರಮವನ್ನು ಬೆಳ್ಳಾರೆ ಮತ್ತು ಪೆರುವಾಜೆ ಗ್ರಾಮದ ಒಂಬತ್ತು ಅಂಗನವಾಡಿ ಕೇಂದ್ರದಿಂದ ಒಂಬತ್ತು ಗರ್ಭಿಣಿ ಸ್ತ್ರೀಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ನಡೆಸಿ ಶುಭಹಾರೈಸಲಾಯಿತು.

55 ಬಗೆಯ ವಿಭಿನ್ನ ಪೌಷ್ಟಿಕ ಆಹಾರ ಪ್ರದರ್ಶನ ನಡೆಯಿತು ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಹಾಗೂ ಕಾರ್ಯಕರ್ತೆಯರಿಗೆ ನಡೆಸಿದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ 1837 ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಸ್ಥಳ ಬೆಳ್ಳಾರೆ ಬಂಗ್ಲೆಗುಡ್ಡೆಯಲ್ಲಿ ಸ್ಮಾರಕ ಮಾಡಲು ಶೀಘ್ರ ಪ್ರಯತ್ನ ಮಾಡುವಂತೆ ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಪದ್ಮನಾಭ ಬೀಡು ಮತ್ತು ಸದಸ್ಯರು ಪುತ್ತೂರು ಉಪ ವಿಭಾಗ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ ಇವರಿಗೆ ಮನವಿ ಪತ್ರ ನೀಡಿ ಅನುಷ್ಠಾನದ ಬಗ್ಗೆ ಬೇಡಿಕೆ ಮತ್ತು ಸ್ಥಳದ ಮಹತ್ವ ಬಗ್ಗೆ ಮಾಹಿತಿ ನೀಡಿದರು.

ಸುಳ್ಯ ತಾಲೂಕು ಮಹಿಳೆಯರ ವಿವಿದೊದ್ದೇಶ ಸಹಕಾರಿ ಸಂಘ ನಿ, ಅಧ್ಯಕ್ಷೆ ರಾಜೀವಿ ಆರ್.ರೈ ಪುಡ್ಕಜೆ ಮತ್ತು ಸುಳ್ಯ ತಾಲೂಕು ತಹಶೀಲ್ದಾರ್ ಮಂಜುನಾಥ್ ಟಿ ಭೇಟಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ ಸ್ವಾಗತಿಸಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ,ಬೆಳ್ಳಾರೆ ವಲಯ ಮೇಲ್ವಿಚಾರಕಿ ಉಷಾ ಪ್ರಸಾದ್ ರೈ ವಂದಿಸಿದರು.

ಸಂಜಯ್ ನೆಟ್ಟಾರು ಮತ್ತು ಬೆಳ್ಳಾರೆ ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ ಕಾರ್ಯಕ್ರಮ ನಿರೂಪಿಸಿದರು.

ಬೆಳ್ಳಾರೆ ಮತ್ತು ಪೆರುವಾಜೆ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ , ಬೆಳ್ಳಾರೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಮತ್ತು ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಸದಸ್ಯರು ಸಹಕರಿಸಿದರು.