ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ: ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

0

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಪಯಸ್ವಿನಿ ಅನುದಾನಿತ ಪ್ರೌಢಶಾಲೆ ಜಾಲ್ಸೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಿತ್ತಡ್ಕ ಇಲ್ಲಿಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದರೆ, ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರಾಥಮಿಕ ವಿಭಾಗದಲ್ಲಿ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.ಪ್ರೌಢಶಾಲಾ ದೈಹಿಕ ಶಿಕ್ಷಕ ರಂಗನಾಥ್ ಮತ್ತು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಗೀತಾ ಇವರು ತರಬೇತಿ ನೀಡಿರುತ್ತಾರೆ.