ಸುಳ್ಯದಲ್ಲಿ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟ

0

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ – ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ಪದವಿ ಪೂರ್ವ ವಿಭಾಗದ ಸುಳ್ಯ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸೆ.19ರಂದು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ ಬೊಮ್ಮೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಪಂದ್ಯಾಟವನ್ನು‌ಉದ್ಘಾಟಿಸಿದರು.

ಸುಳ್ಯ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ ‌ಮುಖ್ಯ ಅತಿಥಿಗಳಾಗಿದ್ದರು.

ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ, ಕಾಲೇಜಿನ ಹಿರಿಯ ಉಪನ್ಯಾಸಕಿ ಶ್ರೀಮತಿ ಹಸೀನಾ ಬಾನು ಎಸ್.ಇ. , ಅರಂತೋಡು ಎನ್ನೆಂಪಿಯುಸಿ ದೈ.ಶಿ. ಉಪನ್ಯಾಸಕಿ ಹಾಗೂಕ್ರೀಡಾ ಸಂಯೋಜಕಿ ಶ್ರೀಮತಿ ಶಾಂತಿ ಎ.ಕೆ., ಸುಳ್ಯಸ.ಪ.ಪೂ. ಕಾಲೇಜಿನ ದೈ.ಶಿ.ಶಿಕ್ಷಕರುಗಳಾದ ನಟರಾಜ ಎಂ.ಎಸ್., ಯೂಸುಫ್ ಎ., ನಂದಕುಮಾರ ಎನ್., ಶಿಕ್ಷಕ ಡಾ.ಸುಂದರ ಕೇನಾಜೆ ಮೊದಲಾದವರು ವೇದಿಕೆಯಲ್ಲಿ ಇದ್ದರು.

ಶ್ರೇಯಸ್ ಪ್ರಾರ್ಥಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಶಿವರಾಮ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಸತ್ಯವತಿ‌ ಕಾರ್ಯಕ್ರಮ ನಿರೂಪಿಸಿದರು.