ಸಿಎಂ ಸಭೆಯಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಭಾಗಿ

0

ಕರ್ನಾಟಕ ರಾಜ್ಯೋತ್ಸವ ಹಾಗೂ ‘ಸುವರ್ಣ ಸಂಭ್ರಮ-50’ ಕಾರ್ಯಕ್ರಮಗಳ ರೂಪುರೇಷೆ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಯವರ ಗೃಹಕಚೇರಿ ಕೃಷ್ಣಾದಲ್ಲಿ ಸೆ. 19 ರಂದು ನಡೆದ ಸಿದ್ಧತಾ ಸಭೆಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರು ಭಾಗವಹಿಸಿದ್ದರು.

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿದ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಸುವರ್ಣ ಸಂಭ್ರಮ-50’ ಕಾರ್ಯಕ್ರಮದ ಸಮಾರೋಪ ಸಮಾರಂಭದ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಗೃಹಸಚಿವ ಜಿ. ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯ ಎಲ್ಲ ಪ್ರಾಧಿಕಾರ ಹಾಗೂ ಅಕಾಡೆಮಿಗಳ ಅಧ್ಯಕ್ಷರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಸುವರ್ಣ ಸಂಭ್ರಮ-50ರ ಅಂಗವಾಗಿ ಮಂಗಳೂರಿನಲ್ಲಿ 2 ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದ ಆಹ್ವಾನಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೀಡಿ, ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ತುಳು ಅಕಾಡೆಮಿ ಅಧ್ಯಕ್ಷ ತಾರನಾಥ ಕಾಪಿಕಾಡ್, ಕೊಂಕಣಿ ಅಕಾಡೆಮಿ ಅಧ್ಯಕ್ಷ, ಜೋಕಿಂ ಸ್ಟಾನಿ ಆಳ್ವರಿಸ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್, ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿಕಂಡ ಮಹೇಶ್ ನಾಚಯ್ಯ, ಹಾಗೂ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಂ ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು.