ಅ.3-20 :ಮಕ್ಕಳಿಗೆ ದಸರಾ ರಜೆ

0

ರಾಜ್ಯದಲ್ಲಿ ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ದಸರಾ ರಜೆ ಘೋಷಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದರೆ, ಈ ಬಾರಿ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗಸೂಚಿ ರೂಪಿಸಲಾಗಿದೆ.

ಅ.3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳ ಆರಂಭಕ್ಕೂ ಮುನ್ನವೇ ಪ್ರಕಟಿಸಿತ್ತು. ಶೈಕ್ಷಣಿಕ ವರ್ಷದ ಮೊದಲ ಅವಧಿಯು ಅ.2ರ ತನಕ ಇರಲಿದೆ. ಸೆ.23ರಿಂದ 30ರವರೆಗೆ ಮಧ್ಯಂತರ ಪರೀಕ್ಷೆಗಳು ನಡೆಯಲಿವೆ.