ಯೇನೆಕಲ್ಲು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ನೂತನ ಶೌಚಾಲಯ ಉದ್ಘಾಟನೆ ಹಾಗೂ ಗುರುವಂದನಾ ಕಾರ್ಯಕ್ರಮ

0

ಯೇನೆಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶೌಚಾಲಯದ ಉದ್ಘಾಟನೆ ಮತ್ತು ಗುರುವಂದನಾ ಕಾರ್ಯಕ್ರಮ ಸೆ. 19ರಂದು ನಡೆಯಿತು.
ಶಾಸಕಿ ಕು. ಭಾಗೀರಥಿ ಮರುಳ್ಯ ಶೌಚಾಲಯ ಉದ್ಘಾಟಿಸಿದರು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಾಲಾ ಎಸ್.ಡಿ.ಎಂ.ಸಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಹಮ್ಮಿಕೊಂಡ ಗುರುವಂದನ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಸುಜಾತ ಕಲ್ಲಾಜೆ, ಕಾರ್ಯದರ್ಶಿ ಮೋನಪ್ಪ, ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ ಕೋಟಿಗೌಡನಮನೆ, ಶ್ರೀಮತಿ ಜಯಂತಿ ಪರಮಲೆ, ಶಶಿಕಲಾ ಏನೇಕಲ್ಲು ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಅಶೋಕ್ ಕುಮಾರ್ ಅಂಬೆಕಲ್ಲು ಮತ್ತು ಸದಸ್ಯರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಎಂಟು ಜನ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಶಾಲಾ ಶೌಚಾಲಯ ಕಟ್ಟಡ ರಚನಾ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಸಂಕಡ್ಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕಿ ಚಂದ್ರಿಕಾ ಬಿ.ಸಿ ಸ್ವಾಗತಿಸಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಅಶೋಕ್ ಕುಮಾರ್ ಅಂಬೆಕಲ್ಲು ವಂದಿಸಿದರು. ವಿದ್ಯಾರ್ಥಿನಿ ಕು. ಸಮೀಕ್ಷ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು, ಊರಿನ ಗಣ್ಯರು ಉಪಸ್ಥಿತರಿದ್ದರು.