ಅಡ್ಕಾರು: ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಂಗಣದಲ್ಲಿ ಜರುಗಲಿರುವ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೆ.21ರಂದು ದೇವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು.

ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ ಅ.12ರಂದು ಬೆಳಿಗ್ಗೆ ಶ್ರೀ ಶಾರದ ದೇವಿಯ ಪ್ರತಿಷ್ಠೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಶೋಭಾಯಾತ್ರೆಯು ಜರುಗಲಿದೆ.

ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ಅಧ್ಯಕ್ಷ ಯತೀಂದ್ರ ಅಡ್ಕಾರು, ದೇವಾಲಯದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ದೇವಸ್ಥಾನದ ಅರ್ಚಕ ಶ್ರೀವರ ಪಾಂಗಣ್ಣಾಯ, ದಿನೇಶ್ ಅಡ್ಕಾರು, ರಜತ್ ಅಡ್ಕಾರು, ಎ.ಎಸ್. ದಾಮೋದರ ಅಡ್ಕಾರು, ಹರ್ಷಿತ್ ಪೇರಾಲು ಸೇರಿದಂತೆ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ಪದಾಧಿಕಾರಿಗಳು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.