ನಂಬರ್ ಪ್ಲೇಟ್ ಇಲ್ಲದೇ ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನ ವಶಕ್ಕೆ ಪಡೆದ ಸುಳ್ಯ ಪೊಲೀಸರು

0


ಸುಳ್ಯ ಪೊಲೀಸರು ರಸ್ತೆ ಸಂಚಾರ ನಿಯಮ ಪಾಲಿಸದ ವಾಹನ ಚಾಲಕರ ಮೇಲೆ ಖಡಕ್ ನಿಗಾ ವಹಿಸಿದ್ದು ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದೇ ಚಲಾಯಿಸುತ್ತಿದ್ದ ಎರಡು ದ್ವಿ ಚಕ್ರವನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಬಳಿಕ ಪ್ರಕರಣ ದಾಖಲಿಸಿ ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಎಸ್ ಐ ಸಂತೋಷ್ ರವರು ಯಾರೇ ಆಗಿರಲಿ ನಿಯಮ ಉಲ್ಲಂಘನೆ ಮಾಡಿ ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಯಾವುದೇ ಮುಲಾಜಿ ಇಲ್ಲದೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಕಳುಹಿಸಲಾಗುತ್ತದೆ. ಇದಕ್ಕೆ ಯಾರೂ ಕೂಡ ಆಸ್ಪದ ನೀಡಬೇಡಿ ಎಂದು ಸೂಚನೆ ನೀಡಿದ್ದಾರೆ.