ಸುಳ್ಯ ಕಸಾಪ ವತಿಯಿಂದ ಡಾ.ಕೆ.ವಿ.ಚಿದಾನಂದರಿಗೆ ಗೌರವಾರ್ಪಣೆ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಭಾವಚಿತ್ರ ಹಸ್ತಾಂತರ

0


ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ವಿಶಿಷ್ಟ ಸೇವಾ ಪ್ರಶಸ್ತಿ ಪಡೆದ ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರಿಗೆ ಗೌರವಾರ್ಪಣೆ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಭಾವಚಿತ್ರ ಹಸ್ತಾಂತರ ಇಂದು ಕನ್ನಡ ಭವನದಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ವಹಿಸಿ, ಡಾ.ಕೆ.ವಿ.ಚಿದಾನಂದರನ್ನು ಸನ್ಮಾನಿಸಿದರು.ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ.ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಭಾವಚಿತ್ರ ಹಸ್ತಾಂತರ ಮಾಡಿದರು.ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಕೃಷ್ಣ ರೈ, ಗುತ್ತಿಗಾರು ಲಯನ್ಸ್ ಕ್ಲಬ್ ಅಧ್ಯಕ್ಷ ಕುಶಾಲಪ್ಪ ತುಂಬತ್ತಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಸುಳ್ಯ ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು,ಕಸಾಪ ಕೇಂದ್ರ ಸಮಿತಿ ಸದಸ್ಯ ಡಾ.ಎಂ.ಕೆ.ಮಾಧವ, ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಕಸಾಪ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಚಂದ್ರಮತಿ ಕೆ., ತೇಜಸ್ವಿ ಕಡಪಳ, ಗೌ.ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಚಂದ್ರಶೇಖರ ಪೇರಾಲು ಸ್ವಾಗತಿಸಿ, ತೇಜಸ್ವಿ ಕಡಪಳ ವಂದಿಸಿದರು.ಕಸಾಪ ನಿರ್ದೇಶಕಿ ಲತಾಶ್ರೀಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.