ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿಗ್ರಾಮ ಆಡಳಿತಾಧಿಕಾರಿಗಳಿಂದ ಸರಕಾರಕ್ಕೆ ಮನವಿ

0

ಬೇಡಿಕೆ ಈಡೇರದಿದ್ದರೆ ಸೆ.26ರಿಂದ ಮುಷ್ಕರ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರಕ್ಕೆ ನಿರ್ಧರಿಸಿದ್ದು ಸೆ.23 ರಿಂದ ತಾಂತ್ರಿಕ ಕೆಲಸಗಳು ಸ್ಥಗಿತಗೊಳಿಸಿದ್ದು ಬೇಡಿಕೆ ಈಡೇರದಿದ್ದರೆ ಸೆ.26 ರಿಂದ ಮುಷ್ಕರ ಹಮ್ಮಿಕೊಳ್ಳಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ಸೆ.23 ರಂದು ಸುಳ್ಯ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.

ಮನವಿಯಲ್ಲೇನಿದೆ ? : ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳ ಬಗ್ಗೆ: ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಹಾಗೂ ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವುಗಳು ಆಗುತ್ತಿದ್ದು, ನಿರಂತರವಾಗಿ ಮಾರಣಾಂತಿಕ ಹಲ್ಲೆ ನಡೆಯುತ್ತಿರುತ್ತದೆ. ಎಲ್ಲಾ ಮೊಬೈಲ್ ಆಪ್ ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗಿರುತ್ತದೆ.
ಆದ್ದರಿಂದ ನಮಗೆ ಮೇಲ್ಕಂಡಂತೆ ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್ ಟಾಪ್/ಗೂಗಲ್ ಕ್ರೋಮ್ ಬುಶ್, ಪ್ರಿಂಟರ್, ಇಂಟರ್ ನೆಟ್ ಸೌಲಭ್ಯವನ್ನು ನೀಡುವವರೆಗೆ ದಿನಾಂಕ:22.09.2024 ರಿಂದ ಈ ಕೆಳಕಂಡ ಮೊಬೈಲ್ ತಂತ್ರಾಂಶಗಳ ಕೆಲಸ ನಿರ್ವಹಿಸದಂತೆ ತೀರ್ಮಾನಿಸಲಾಗಿರುತ್ತದೆ.

  1. ఆಧಾರ್
  2. ಲ್ಯಾಂಡ್ ಬೀಟ್
  3. ಬಗೈರ್ ಹುಕುಂ
  4. ಹಕ್ಕುಪತ್ರ
  5. ನಮೂನೆ 1-5 ರ ವೆಬ್ ಅಪ್ಲಿಕೇಷನ್
  6. ಪೌತಿ ಅಂದೋಲನ ಆಪ್
  7. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ;

ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಬಿರಾ

ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ

ಗೂಗಲ್ ಕ್ರೋಮ್ ಬುಕ್/ ಲ್ಯಾಪ್ ಟಾಪ್

ಪ್ರಿಂಟರ್ ಮತ್ತು ಸ್ಕ್ಯಾನ‌ರ್

  1. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ:

ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಲ್ಲಿ ವಂಚಿತರಾಗಿ ಸುಮಾರು 30 ವರ್ಷಗಳ ಮೇಲ್ಪಟ್ಟು ಪದೋನ್ನತಿಯನ್ನು ನಿವೃತ್ತಿ ಅಂಚಿನಲ್ಲಿ ಪಡೆಯುತ್ತಿರುವುದರಿಂದ, ರಾಜ್ಯಾದಲ್ಲಿನ 1196 ಗ್ರೇಡ್-1 ಗ್ರಾಮ ಪಂಚಾಯತ್ ಹಾಗೂ 304 ಕಸಬಾ ಹೋಬಳಿ ವೃತ್ತಗಳನ್ನು “ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ” ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜಸ್ವ ನಿರೀಕ್ಷಕರು/ಪ್ರಥಮ ದರ್ಜೆ ಸಹಾಯಕರು/ ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರೀಷ್ಕರಿಸಿ ಮೇಲ್ದರ್ಜೆಗೇರಿಸಿ ಪದೋನ್ನತಿಯನ್ನು ನೀಡುವ ಬಗ್ಗೆ,

ಅಂತರ್ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡುವ ಬಗ್ಗೆ,

ಕೆ.ಸಿ.ಎಸ್.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು, ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ

ಕ್ರಮ ಜರುಗಿಸುವಂತೆ ಸೂಕ್ತ ಆದೇಶ ನೀಡುವ ಬಗ್ಗೆ, ಕಂದಾಯ ಇಲಾಖೆಯ 3ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸುವ ಬಗ್ಗೆ,

ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಬೇಪ್ಪತೆಯನ್ನು

ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ವರಿಗಣಿಸುವ ಬಗ್ಗೆ,

ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯುವ ಬಗ್ಗೆ,

ಪ್ರಯಾಣ ಭತ್ಯೆ ದರವನ್ನು 500/- ರೂಗಳಿಂದ 3000/- ರೂಗಳಿಗೆ ಹೆಚ್ಚುವರಿ ಮಾಡುವ ಬಗ್ಗೆ,

ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸುವ ಬಗ್ಗೆ,

ವಿಶೇಷ ಚೇತನ ಹಾಗೂ ಕೆಲವು ಅನಾರೋಗ್ಯ ಪ್ರಕರಣಗಳನ್ನು ಹೊರತುಪಡಿಸಿ, ತಾಲ್ಲೂಕು ಕಛೇರಿ/ ಉಪವಿಭಾಗಾಧಿಕಾರಿಗಳ ಕಛೇರಿ/ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಿಯೋಜನೆ ಮೇಲೆ ಕೆಲಸ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರ ಮೂಲ ವೃತ್ತಗಳಿಗೆ ಕರ್ತವ್ಯ ನಿರ್ವಹಿಸಲು ಆದೇಶಿಸಿಸಬೇಕು