ಪಂಜ:ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ

0

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಹಾಗೂ ಗ್ರಾಮ ಪಂಚಾಯತ್ ಪಂಜ ಇದರ ಸಹಯೋಗದಲ್ಲಿ ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಸೆ.24 ರಂದು ನಡೆಯಿತು.

ಪಂಜ ಗ್ರಾಮ ಪಂಚಾಯತ್ ಕಚೇರಿ ಬಳಿ ನಾಯಿಗಳಿಗೆ ಲಸಿಕೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ, ಜಳಕದಹೊಳೆ,ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಪಶು ವೈದ್ಯಾಧಿಕಾರಿ ಡಾ.ಸೂರ್ಯನಾರಾಯಣ ಭಟ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಯು.ಬಿ, ಕಾರ್ಯದರ್ಶಿ ಸೀತಾರಾಮ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಣ ಗೌಡ ಬೊಳ್ಳಾಜೆ, ಚಂದ್ರಶೇಖರ ದೇರಾಜೆ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಪಶುಸಖಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.