ಅರಂತೋಡಿನ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಎನ್.ಎಸ್.ಎಸ್. ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಅವರು ಗಿಡಕ್ಕೆ ನೀರು ಎರೆಯುವ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಚಾಲನೆ ನೀಡಿ, ಮಾತನಾಡಿದರು.










ಕಾಲೇಜಿನ ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಅವರು ಎನ್.ಎಸ್.ಎಸ್. ವಾರ್ಷಿಕ ಶಿಬಿರದ ಆಯೋಜನೆ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಉಪಸ್ಥಿತರಿದ್ದರು. ಎನ್.ಎಸ್
.ಎಸ್. ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ.ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಕಾರ್ಯಕ್ರಮಾಧಿಕಾರಿ ಭಾಗ್ಯಶ್ರೀ ವಂದಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಮತ್ತು
ಎನ್.ಎಸ್.ಎಸ್. ಸ್ವಯಂ ಸೇವಕರು ಭಾಗವಹಿಸಿದ್ದರು.









