ಮಂಡೆಕೋಲು ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ಸಂಸ್ಥೆ ಪ್ರಶಸ್ತಿ

0

ಸೆ.24ರಂದು ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ (ಸ್ಕ್ಯಾಡ್ಸ್) ವಾರ್ಷಿಕ ಮಹಾಸಭೆಯಲ್ಲಿ 2023-24 ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಹಾಗೂ ಬಿಡಿಭಾಗಗಳನ್ನು ಖರೀದಿಸಿ ಜಿಲ್ಲಾ ಮಟ್ಟದಲ್ಲಿ ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ರವರು ಪ್ರಶಸ್ತಿ ಪಡೆದುಕೊಂಡರು.