ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್.ರಿಗೆ ಸುಳ್ಯ ದಸರಾ ಆಮಂತ್ರಣ ನೀಡಿ ಅಹ್ವಾನ

0

ಸುಳ್ಯ ದಸರಾ 2024 ರ ಆಮಂತ್ರಣ ಪತ್ರವನ್ನು ವಿಧಾನ ಸಭಾ ಅಧ್ಯಕ್ಷರಾದ ಯು ಟಿ ಖಾದರ್ ರವರಿಗೆ ನೀಡಿ ಆಹ್ವಾನಿಸಲಾಯಿತು.

ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್ ರವರು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭ ಯು ಟಿ ಖಾದರ್ ರವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಕಾರ್ಯಕ್ರಮದ ಯಶಸ್ಸಿಗೆ ಪೂರ್ಣ ಸಹಕಾರ ನೀಡುವ ಬಗ್ಗೆ ಸೂಚನೆ ನೀಡಿದರು.

ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್ ಸಂಶುದ್ದೀನ್ ಈ ಸಂಧರ್ಭ ಉಪಸ್ಥಿತರಿದ್ದರು.