ಕೊಡಗು ಸಂಪಾಜೆ: ಪಯಸ್ವಿನಿ ಸಹಕಾರ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

0
ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ವತಿಯಿಂದ ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕಳೆದ 2022-23 ನೇ ಸಾಲಿನ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 ಸೆ.27ರಂದು ಕೊಡಗು ಡಿ.ಸಿ.ಸಿ. ಬ್ಯಾಂಕ್ ಅದ್ಯಕ್ಷರೂ ,ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾದ ಕೊಡಂದೇರ ಬಾಂಡ್ ಗಣಪತಿರವರು ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ.  ಅನಂತ್ ಊರುಬೈಲು ಅವರಿಗೆ ಪ್ರಮಾಣಪತ್ರ ಮತ್ತು ನಗದು ಚೆಕ್ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಕೆ.ಆನಂದ, ನಿರ್ದೇಶಕರಾದ ಯಶವಂತ ಡಿ.ಡಿ , ಕಿಶನ್ ಪಿ.ಪಿ ಅವರು ಉಪಸ್ಥಿತರಿದ್ದರು.