ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಆಶ್ರಯದಲ್ಲಿ ಪೆರುವಾಜೆ ಡಿಗ್ರಿ ಕಾಲೇಜಿನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿ, ಸುಳ್ಯ ತಾಲೂಕು ಬೆಳ್ಳಾರೆ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ, ಬೆಳ್ಳಾರೆ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ. ಹೇಮಾವತಿ ಅಮ್ಮನವರ ಆಶೀರ್ವಾದಗಳೊಂದಿಗೆ ಸೆ. 27ರಂದು ಪೆರುವಾಜೆಯ ಡಾ. ಶಿವರಾಮ ಕಾರಂತ ಪದವಿ ಕಾಲೇಜಿನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಕಾರ್ಯಕ್ರಮ ಉದ್ಘಾಟಿಸಿ, ಸ್ವಾಸ್ಥ ಸಂಕಲ್ಪದ ಬಗ್ಗೆ ಮಾತನಾಡುತ್ತಾ ಕಾಲೇಜು ವಿದ್ಯಾರ್ಥಿಗಳಿಗೆ ಹದಿ ಹರೆಯದಲ್ಲಿ ದಾರಿ ತಪ್ಪುವ ದುಶ್ಚಟ, ದುರಭ್ಯಾಸ ಗಳಿಂದ ಆಗುವ ದುಷ್ಪರಿಣಾಮ ಗಳು, ಮಧ್ಯಪಾನ ಧೂಮಪಾನ ಡ್ರಗ್ಸ್ ಅಡಿಕ್ಟ್ ವಿಚಾರವಾಗಿ ಮಾಹಿತಿ ನೀಡಿದರು. ಡಾ. ಶಿವರಾಮ ಕಾರಂತ ಕಾಲೇಜಿನ ಪ್ರಾಂಶುಪಾಲರಾದ ಜ್ಯೋತಿ ಯಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಬೆಳ್ಳಾರೆ ವಲಯಾಧ್ಯಕ್ಷ ಆನಂದ ಗೌಡ ಪೆರಿಯಾಣ, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯದ ಅಧ್ಯಕ್ಷೆ ಶ್ರೀಮತಿ ವೇದ ಎಚ್. ಶೆಟ್ಟಿ, ಐಕ್ಯುಎಸಿ ಸಂಚಾಲಕರಾದ ಡಾ. ರಾಮಚಂದ್ರ ಕೆ, ಯೋಜನಾಧಿಕಾರಿ ಗಿರೀಶ್ ಸಿ.ಆರ್, ಪೆರುವಾಜೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಂದರ ನಾಯ್ಕ,
ಸೇವಪ್ರತಿನಿಧಿ ಶ್ರೀಮತಿ ಹರೀನಾಕ್ಷಿ, ಶ್ರೀಮತಿ ಉಷಾ, ಪೆರುವಾಜೆ ಕಾಲೇಜಿನ ಉಪನ್ಯಾಸಕರು ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಯಾದ ಕು ಶ್ರಾವ್ಯ ಕಾರ್ಯಕ್ರಮ ನಿರೂಪಣೆ ಮಾಡಿದರು.


ವಲಯ ಮೇಲ್ವಿಚಾರಕರು ಶ್ರೀಮತಿ ವಿಶಾಲ ಸ್ವಾಗತಿಸಿ, ವಿದ್ಯಾರ್ಥಿ ವಿನ್ಯಾಸ್ ವಂದಿಸಿದರು. ವಿದ್ಯಾರ್ಥಿಗಳಾದ ಸ್ನೇಹ ಮತ್ತು ಚರಣ್ ಕಾರ್ಯಕ್ರಮದ ಅನಿಸಿಕೆ ವ್ಯಕ್ತಪಡಿಸಿದರು. ಡ್ರಗ್ಸ್ ನಿಂದ ಆಗುವ ದುಷ್ಪಪರಿಣಾಮಗಳ ಬಗ್ಗೆ ” ನಶೆಯೆಂಬ ನರಕ ” ಕಿರು ಚಿತ್ರ ವೀಕ್ಷಣೆ ಮಾಡಲಾಯಿತು.