ಅ.3 – 12 : ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ನಾಲ್ಕುರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ. 3 ರಿಂದ 12ರ ವರೆಗೆ ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಅ. 3ರಂದು ಬೆಳಗ್ಗೆ ಗಣಪತಿ ಹವನ ದೊಂದಿಗೆ ಆರಂಭವಾಗುವ ನವರಾತ್ರಿ ಉತ್ಸವವು ಪ್ರತಿದಿನ ಬೆಳಗ್ಗೆ ಮಹಾಪೂಜೆ, ವಾಹನಪೂಜೆ ಮತ್ತು ಮಧ್ಯಾಹ್ನ ಮಹಾಪೂಜೆ, ವಾಹನ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆದು ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ, ವಾಹನಪೂಜೆ ಅನ್ನಸಂತರ್ಪಣೆ ನಡೆಯಲಿದೆ. ಅ. 7ರಂದು ಸಾಮೂಹಿಕ ಚಂಡಿಕಾಹವನ, ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.