ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ – 2024

0

ಮಹಿಳಾ ಸಮಿತಿಯ ಪೂರ್ವಭಾವಿ ಸಭೆ – ಟ್ಯಾಬ್ಲೋ ತಯಾರಿಕೆಯ ಕುರಿತು ಚರ್ಚೆ

ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ ಉತ್ಸವ ಸಮಿತಿ ವತಿಯಿಂದ ನಡೆಯಲಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ ಕಾರ್ಯಕ್ರಮದ ಪ್ರಯುಕ್ತ ಮಹಿಳಾ ಸಮಿತಿಯ ಪೂರ್ವಭಾವಿ ಸಭೆಯು ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸೆ.28ರಂದು ಸಂಜೆ ನಡೆಯಿತು.

ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ ಅವರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಅ.12ರಂದು ಜರುಗಲಿರುವ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ತಾಲೂಕಿನ ಮಹಿಳೆಯರಿಂದ ಮನೆಯಲ್ಲಿ ತಯಾರಿಸುವ ವಿವಿಧ ಆಹಾರ ಖಾದ್ಯಗಳ ತಯಾರಿ, ಗೃಹ ತಯಾರಿಕಾ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಮಹಿಳೆಯರಿಗೆ ನಡೆಯಲಿರುವ ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಮಹಿಳಾ ಘಟಕದ ವತಿಯಿಂದ ಶೋಭಾಯಾತ್ರೆಯಲ್ಲಿ ಸಾಗುವ ಟ್ಯಾಬ್ಲೋ ತಯಾರಿಕೆಯ ಕುರಿತಂತೆಯೂ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್., ಮಾಧ್ಯಮ ವಕ್ತಾರ ಕೃಷ್ಣ ಬೆಟ್ಟ, ಮಹಿಳಾ ಸಮಿತಿಯ ಗೌರವ ಸಲಹೆಗಾರರುಗಳಾದ ಶ್ರೀಮತಿ ಯಶೋದಾ ರಾಮಚಂದ್ರ, ಶ್ರೀಮತಿ ಲತಾ ಮಧುಸೂದನ್, ಕಾರ್ಯದರ್ಶಿ ಶ್ರೀಮತಿ ಶ್ರೀದೇವಿ ನಾಗರಾಜ್ ಭಟ್ ಹಾಗೂ ಶ್ರೀ ಶಾರದಾಂಬ ಮಹಿಳಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.