ಅರಂತೋಡು ಗ್ರಾ.ಪಂ. ಸಹಭಾಗಿತ್ವದಲ್ಲಿ ಹೆದ್ದಾರಿ ಬದಿ ಸ್ವಚ್ಛತಾ ಕಾರ್ಯ

0

ಅರಂತೋಡು ಗ್ರಾಮ ಪಂಚಾಯತಿ, ವಾಹನ ಚಾಲಕ – ಮಾಲಕ ಸಂಘ , ಅರಂತೋಡು – ತೊಡಿಕಾನ ವಲಯದ ಸ್ತ್ರೀಶಕ್ತಿ ಸಂಘದ ಸಹಭಾಗಿತ್ವದಲ್ಲಿ 64ನೇ ರಾಷ್ಟ್ರೀಯ ಹೆದ್ದಾರಿ ಬದಿ ಸ್ವಚ್ಛತಾ ಕಾರ್ಯವು ಸೆ.29ರಂದು ನಡೆಯಿತು.
ಈ ಸಂದರ್ಭದಲ್ಲಿ ಗ್ರಾ‌.ಪಂ. ಅಧ್ಯಕ್ಷ ಕೇಶವ ಅಡ್ತಲೆ, ಉಪಾಧ್ಯಕ್ಷೆ ಶ್ರೀಮತಿ ಭವಾನಿ ಚಿಟ್ಟನ್ನೂರು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್., ಗ್ರಾ.ಪಂ. ಸದಸ್ಯರುಗಳು, ಗ್ರಾಮದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಾಹನ ಚಾಲಕ – ಮಾಲಕ ಸಂಘದ ಪದಾಧಿಕಾರಿಗಳು, ಸ್ರ್ತೀಶಕ್ತಿ ಸಂಘದ ಪದಾಧಿಕಾರಿಗಳು, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.