ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ-ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ

0

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ 26 ನೇ ವರುಷದ ಭಜನಾ ತರಬೇತಿ ಕಮ್ಮಟದಲ್ಲಿ ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ ತಾಲೂಕಿನ ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ ನೀಡಿ ಗೌರವಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಶ್ರೀ ಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಮಾತೃಶ್ರೀ ಹೇಮಾವತಿ ಹೆಗ್ಗಡೆ ರವರು ಪುರಸ್ಕಾರ ನೀಡಿ ಗೌರವಿಸಿದರು. ಭಜನಾ ಮಂಡಳಿ ಅಧ್ಯಕ್ಷ ನಾಗಪ್ಪ ಗೌಡ ಪಂಜದಬೈಲು, ನಿಕಟಪೂರ್ವ ರಾಜ್ಯಧ್ಯಕ್ಷ ಬಾಲಕೃಷ್ಣ ಪುತ್ಯ, ಕಾರ್ಯದರ್ಶಿ ಗುರುಪ್ರಸಾದ್ ತೋಟ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಯತೀಶ್ ರೈ ದುಗಲಡ್ಕ, ಕಾರ್ಯದರ್ಶಿ ಸತೀಶ್ ಕಲ್ಮಕಾರು , ಭಜನಾ ಮಂಡಳಿಯ ಪೂರ್ವಾಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು.