ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಖ್ಯ ರಸ್ತೆಯ ಬದಿ ಹಾಗೂ ಪೇಟೆಯಲ್ಲಿ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ

0

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಖ್ಯ ರಸ್ತೆಯ ಬದಿಗಳಲ್ಲಿ ಹಾಗೂ ಮುಖ್ಯ ಪೇಟೆಯಲ್ಲಿ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಅ.1 ರಂದು ಹಮ್ಮಿಕೊಳ್ಳಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ, ಉಪಾಧ್ಯಕ್ಷ ನಾರಾಯಣ ಎನ್. ಸದಸ್ಯರುಗಳಾದ ಚಂದ್ರಶೇಖರ ದೇರಾಜೆ, ಲಕ್ಷ್ಮಣ ಗೌಡ ಬೊಳ್ಳಾಜೆ, ಶ್ರೀಮತಿ ವೀಣಾ ಪಂಜ, ಪಂಚಾಯತ್ ಅಧಿಕಾರಿ ಶ್ರೀ ಜಯಂತ್ ಯು.ಬಿ. ಕಾರ್ಯದರ್ಶಿ ಸೀತರಾಮ ಎಸ್., ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಘನ ತ್ಯಾಜ್ಯ ಘಟಕದ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.